ಹೊಸದಿಗಂತ ವರದಿ, ಶಿವಮೊಗ್ಗ:
ಭದ್ರಾವತಿಯಲ್ಲಿ ಪಾಕಿಸ್ತಾನ-ಪರ ಘೋಷಣೆ ಕೂಗಿರುವುದು ಕಾಂಗ್ರೆಸ್ ಸರ್ಕಾರದ ಮಿತಿ ಮೀರಿದ ತುಷ್ಟೀಕರಣ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶ ವಿರೋಧಿ, ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಸ್ವಚ್ಛಂದವಾಗಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳು ಅತ್ಯಂತ ಆತಂಕಕಾರಿಯಾಗಿದೆ. ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪಾಕಿಸ್ತಾನ-ಪರ ಘೋಷಣೆ ಕೂಗಿರುವ ಕಿಡಿಗೇಡಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.