ವಾಟ್ಸ್‌ಆ್ಯಪ್ ಸ್ಟೇಟಸ್‌ ನಲ್ಲಿ ಪಾಕ್ ಪರ ವಿಡಿಯೋ: ಶಿವಮೊಗ್ಗದಲ್ಲಿ ಯುವಕನ ಬಂಧನ

ಹೊಸದಿಗಂತ ವರದಿ, ಶಿವಮೊಗ್ಗ:

ಪಾಕಿಸ್ತಾನದ ಪರ ವಿಡಿಯೋ ವಾಟ್ಸ್‌ಆ್ಯಪ್ ಸ್ಟೇಟಸ್‌ಗೆ ಹಾಕಿಕೊಂಡಿದ್ದ ಯುವಕನನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಟ್ಯಾಂಕ್ ಮೊಹಲ್ಲಾ ನಿವಾಸಿ ಇಬ್ರಾಹಿಂ ಖಾನ್ ಅಲಿಯಾಸ್ ಇಬ್ಬು ಬಂಧಿತ ಆರೋಪಿ. ಈತ ತನ್ನ ವಾಟ್ಸ್‌ಆ್ಯಪ್ ಸ್ಟೇಟಸ್‌ಗೆ ಪಾಕಿಸ್ತಾನದಲ್ಲಿರುವ ಮುಸ್ಲಿಮರನ್ನು ಕ್ಷೇಮವಾಗಿಡು ಎಂದು ಅಲ್ಲಾಹುವಿನ ಬಳಿ ಉರ್ದು ಭಾಷೆಯಲ್ಲಿ ಪ್ರಾರ್ಥಿಸುವ ವಿಡಿಯೋ ಹಾಕಿಕೊಂಡಿದ್ದ. ಈ ಬಗ್ಗೆ ಭಾನುವಾರ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.‌

ಮೇ 7ರಂದು ಬೆಳಗಿನ ಜಾವ ಭಾರತ ಸೇನೆ ಆಪರೇಷನ್ ಸಿಂಧೂರ ಹೆಸರಿಲ್ಲಿ ಪಾಕಿಸ್ತಾನದ ಉಗ್ರರ ನೆಲೆ ಮೇಲೆ ದಾಳಿ ನಡೆಸಿತ್ತು., ಆಂಗ್ಲ ಮತ್ತು ಉರ್ದು ಮಿಶ್ರಿತ ಭಾಷೆಯಲ್ಲಿರುವ ವಿಡಿಯೋ ತುಣುಕಿನಲ್ಲಿ ಪಾಕ್‌ನಲ್ಲಿ ಇರುವವರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಪ್ರಾರ್ಥನೆ ಮಾಡಲಾಗಿತ್ತು.

ಇಂತಹ ವಿಡಿಯೋ ಹಾಕಿಕೊಂಡಿದ್ದ ಆರೋಪಿಯನ್ನು ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರು ಸೋಮವಾರ ಕೋಟೆ ಠಾಣೆಗೆ ಭೇಟಿ ನೀಡಿ ಒತ್ತಾಯಿಸಿದ್ದರು..ಅದರ ಬೆನ್ನಲ್ಲೇ ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!