ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್- ಹಮಾಸ್ ಭೀಕರ ಯುದ್ಧ ಮುಂದುವರಿದಿದ್ದು, ಪ್ಯಾಲೆಸ್ತೀನ್ ಪರವಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆದಿದೆ.
ಬಹುತ್ವ ಕರ್ನಾಟಕ ಸದಸ್ಯರು ಎಂಜಿ ರೋಡ್ ಬಳಿ ಪ್ರತಿಭಟನೆ ನಡೆಸಿದ್ದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಾಗಿದೆ.
ಗಾಜಾ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು, ಭಾರತ ಇಸ್ರೇಲ್ ಮೇಲೆ ಒತ್ತಡ ಹಾಕಿ ಪ್ಯಾಲೆಸ್ತೀನ್ ಪ್ರತ್ಯೇಕ ದೇಶವಾಗುವಂತೆ ಮಾಡಬೇಕು ಎಂದು ಪ್ರತಿಭಟನೆ ನಡೆಸಲಾಗಿತ್ತು.
ಯಾವುದೇ ಅನುಮತಿ ಇಲ್ಲದೆ ಪ್ರತಿಭಟನೆ ನಡೆದಿದ್ದು, ಎಫ್‌ಐಆರ್ ದಾಖಲಾಗಿದೆ.