Saturday, December 9, 2023

Latest Posts

ನಾಗರಿಕ ಸಂಸ್ಥೆಗಳ ನೇಮಕಾತಿ ಹಗರಣ: ಬಂಗಾಳ ಆಹಾರ ಸಚಿವರ ಮನೆ ಮೇಲೆ ಇಡಿ ದಾಳಿ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುರುವಾರ ಪಶ್ಚಿಮ ಬಂಗಾಳದ ಮತ್ತೊಬ್ಬ ಸಚಿವರ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಮಧ್ಯಗ್ರಾಮ್ ಪುರಸಭೆಯಲ್ಲಿ ನಡೆದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಪಶ್ಚಿಮ ಬಂಗಾಳದ ಸಚಿವ ರತಿನ್ ಘೋಷ್ ನಿವಾಸದಲ್ಲಿ ಶೋಧ ನಡೆಸುತ್ತಿದೆ.

ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಡಿ ಕೋಲ್ಕತ್ತಾದಲ್ಲಿರುವ ಸಚಿವರ ಮನೆ ಸೇರಿದಂತೆ 13 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಮಧ್ಯಮಗ್ರಾಮ ಪುರಸಭೆಯಲ್ಲಿ ಅನರ್ಹರನ್ನು ಸರ್ಕಾರಿ ಉದ್ಯೋಗಗಳಿಗೆ ನೇಮಿಸಿಕೊಳ್ಳಲು ಘೋಷ್ ಹಣ ಪಡೆದು ಹಗರಣ ನಡೆಸುತ್ತಿದ್ದಾರೆ ಎಂದು ಇಡಿ ಆರೋಪಿಸಿದೆ. ಘೋಷ್ ಮತ್ತವರ ಸಹೋದ್ಯೋಗಿಗಳು ಉದ್ಯೋಗಕ್ಕಾಗಿ ಅಭ್ಯರ್ಥಿಗಳಿಂದ ಲಂಚ ಪಡೆದ ಆರೋಪದ ಮೇಲೆ ಇಡಿ ತನಿಖೆ ನಡೆಸುತ್ತಿದೆ. ಇಡಿ ಶೋಧ ಕಾರ್ಯ ಮುಂದುವರಿದಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!