ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್ಪಿಎಸ್ಸಿ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ರಾಜಸ್ಥಾನದ ಮಾಜಿ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೋತಸ್ರಾ ಮತ್ತು ಕಾಂಗ್ರೆಸ್ ಶಾಸಕ ಓಂ ಪ್ರಕಾಶ್ ಹಡ್ಲಾ ಅವರ ನಿವಾಸಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಪೇಪರ್ ಸೋರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಬ್ಬರು ಕಾಂಗ್ರೆಸ್ ನಾಯಕರಿಗೆ ಸೇರಿದ 11 ಕ್ಷೇತ್ರಗಳಲ್ಲಿ ಶೋಧ ನಡೆಸಲಾಗುತ್ತಿದೆ.
ರಾಜಸ್ಥಾನದ ಜೈಪುರ, ದೌಸಾ ಮತ್ತು ಸಿಕರ್ ಪ್ರದೇಶಗಳಲ್ಲಿ ಇಬ್ಬರು ಕಾಂಗ್ರೆಸ್ ನಾಯಕರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನ.25ರಂದು ರಾಜಸ್ಥಾನ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಿಢೀರ್ ಶೋಧ ನಡೆಸುತ್ತಿರುವುದು ಗಮನಾರ್ಹ.
ಒಂದೆಡೆ ರಾಜಸ್ಥಾನ ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದೆಡೆ ಇಡಿ ದಾಳಿಯ ಸರಣಿ ಮುಂದುವರೆದಿದೆ.