ಪ್ರವೀಣ್ ನೆಟ್ಟಾರು ಹತ್ಯೆಯ ತನಿಖೆ ಎನ್‌ಐಎಗೆ ವಹಿಸಿ: ಕೇಂದ್ರ ಗೃಹ ಸಚಿವಾಲಯ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ.

ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್, ಆಗಸ್ಟ್‌ 3 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಾಗಿ ಪತ್ರ ಬರೆದು ಆದೇಶಿಸಿದ್ದಾರೆ. ಇದೀಗ ಆದೇಶದ ಪ್ರತಿಯನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ಡಿಜಿಪಿ ಅವರಿಗೆ ಕಳುಹಿಸಿಕೊಡಲಾಗಿದೆ.

ಪ್ರಕರಣವು ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ- 2008 ರ ಅಡಿಯಲ್ಲಿ ಬರುವ ಅಪರಾಧ ಎಂಬ ಅಭಿಪ್ರಾಯಕ್ಕೆ ಕೇಂದ್ರ ಸರ್ಕಾರ ಬಂದಿದೆ. ಅಪರಾಧದ ಗಂಭೀರತೆ ಮತ್ತು ಅದರ ಅಂತಾರಾಜ್ಯ ಪರಿಣಾಮಗಳನ್ನು ಪರಿಗಣಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ, 2008 ರ ಪ್ರಕಾರ ತನಿಖೆಗೆ ಒಳಪಡಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರವೀಣ್ ಬೈಕ್‌ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಬೈಕ್‌ನಲ್ಲಿ​ ಆಗಮಿಸಿದ ಮುಸುಕುಧಾರಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!