ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಸುತ್ತಮುತ್ತಲೂ ನಾಳೆಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆಯನ್ನು ಸಹ ನಡೆಸುವಂತಿಲ್ಲ ಎಂದು ಪೊಲೀಸರು ಆದೇಶದಲ್ಲಿ ತಿಳಿಸಿದ್ದಾರೆ.
ಜುಲೈ 3 ರಿಂದ 14ರ ವರೆಗೆ ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆಯ ತನಕ ವಿಧಾನಸೌಧ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಜುಲೈ 3ರ ಸೋಮವಾರ ಕರ್ನಾಟಕ ವಿಧಾನಸಭೆ ಬಜೆಟ್ ಅಧಿವೇಶನ ಪ್ರಾರಂಭವಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜುಲೈ 7ರಂದು ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.