ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲವು ದಿನಗಳ ಹಿಂದೆ ಬಿಗ್‌ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಧರಿಸಿದ್ದ ಕಾರಣ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.
ಇದೀಗ ರ್ತೂರು ಸಂತೋಷ್ ಬಂಧನ ಉಳಿದ ಸ್ಯಾಂಡಲ್ ವುಡ್ ನಾಯಕರಿಗೆ ಸಮಸ್ಯೆ ತಂದೊಡ್ಡಿದೆ.
ಸ್ಯಾಂಡಲ್‌ವುಡ್ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡ ಪಿ.ಆರ್. ರಮೇಶ್ ಅವರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಅದೇ ರೀತಿ ದರ್ಶನ್ , ಅವಧೂತ ವಿನಯ್ ಗುರೂಜಿ ವಿರುದ್ಧ ದೂರು ದಾಖಲಿಸಲಾಗಿದೆ. ಉಳಿದಂತೆ ರಾಕ್‌ಲೈನ್ ವೆಂಕಟೇಶ್ ಮತ್ತು ನಟ ನಿಖಿಲ್ ಕುಮಾರಸ್ವಾಮಿ ವಿರುದ್ಧವೂ ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಮುಖಂಡ ಹಾಗೂ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಪಿ.ಆರ್. ರಮೇಶ್ ಅವರು ನಟ ಜಗ್ಗೇಶ್ ವಿರುದ್ಧ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ನಟ ಜಗ್ಗೇಶ ಅವರು ಹುಲಿ ಉಗುರು ಪೆಂಡೆಂಟ್ ಧರಿಸಿದ ಬಗ್ಗೆ ಹೇಳಿಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಸಂಬಂಧ ನಟ ಜಗ್ಗೇಶ್ ವಿರುದ್ಧ ಕಾಂಗ್ರೆಸ್ನ ಮಾಜಿ ಎಂಎಲ್ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ.
ಹುಲಿ ಉಗುರಿನ ಪೆಂಡೆಂಟ್ ಧರಿಸಿದ ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಗೂ ನಟ ದರ್ಶನ್ ವಿರುದ್ಧ ದೂರು ದಾಖಲಾಗದ್ದು, ಅವರಿಗೆ ನೋಟಿಸ್ ನೀಡಲಾಗುವುದು. ಇನ್ನು ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮತ್ತು ನಟ ನಿಖಿಲ್ ಕುಮಾರಸ್ವಾಮಿ ಅವರೂ ಹುಲಿ ಉಗುರು ಪೆಂಡೆಂಟ್ ಧರಿಸಿದ ಫೋಟೋಗಳು ಹರಿದಾಡುತ್ತಿದ್ದು, ಅದನ್ನು ಪರಿಶೀಲನೆ ಮಾಡಿಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.