ಮೈಕ್ರೋಸಾಫ್ಟ್ ಸಾಫ್ಟ್ ವೇರ್ ನಲ್ಲಿ ಸಮಸ್ಯೆ: ವಿಮಾನ ಹಾರಾಟದಲ್ಲಿ ವ್ಯತ್ಯಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಕ್ರೋಸಾಫ್ಟ್ ಸಾಫ್ಟ್ ವೇರ್ ನಲ್ಲಿ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಆನ್ ಲೈನ್ ಸೇವೆಯಲ್ಲಿ ವ್ಯತ್ಯವಾಗಿದ್ದು, ಪ್ರಮುಖವಾಗಿ ವಿಮಾನ ನಿಲ್ದಾಣಗಳಲ್ಲಿ ತೊಂದರೆ ಎದುರಾಗಿದೆ.

ಮೈಕ್ರೋಸಾಫ್ಟ್ ನ ಕ್ಲೌಡ್ ಸರ್ವೀಸ್ ನಲ್ಲಿ ತಾಂತ್ರಿಕ ಸಮಸ್ಯೆಯುಂಟಾಗಿದೆ.ಇದರಿಂದ ಜಗತ್ತಿನಾದ್ಯಂತ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ.

ಷೇರುಮಾರುಕಟ್ಟೆ, ಬ್ಯಾಂಕಿಂಗ್ ಕ್ಷೇತ್ರ, ವಿಮಾನ, ರೈಲು ಸೇವೆಗಳಲ್ಲಿ ವ್ಯತ್ಯಯವುಂಟಾಗಿದೆ. ಭಾರತದ ಬಹುತೇಕ ವಿಮಾನ ನಿಲ್ದಾಣಗಳಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯವುಂಟಾಗಿದೆ.

ಟಿಕೆಟ್ ಬುಕ್ಕಿಂಗ್, ಚೆಕ್ ಇನ್, ಚೆಕ್ ಔಟ್, ಬೋರ್ಡಿಂಗ್ ಪಾಸ್ ಸೇರಿದಂತೆ ಹಲವು ಕೆಲಸಗಳು ಸ್ಥಗಿತಗೊಂಡಿದ್ದರಿಂದ ಸಿಬ್ಬಂದಿಗಳು ಮ್ಯಾನುವಲ್ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ವಿಮಾನ ಹಾರಾಟ ವಿಳಂಬವಾಗುತ್ತಿದೆ.

ಸಾಫ್ಟ್ ವೇರ್ ಸಮಸ್ಯೆಯಿಂದಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನ ಹಾರಾಟದಲ್ಲಿ ವಿಳಂಬವಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ.

ಮಂಗಳೂರು, ಹುಬ್ಬಳ್ಳಿ, ಗೋವಾ, ಹೈದರಾಬಾದ್, ಕೇರಳ, ದೆಹಲಿ, ಕೋಲ್ಕತ್ತಾ ಸೇರಿದಂತೆ ಬಹುತೇಕ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ವಿಮಾನ ಹಾರಾಟದಲ್ಲಿ ವ್ಯತ್ಯವಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here