Monday, December 22, 2025

ʼಪಕ್ಷದೊಳಗಿನ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳಬೇಕುʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ನಾಯಕತ್ವದ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದೊಳಗಿನ ಯಾವುದೇ ಭಿನ್ನಾಭಿಪ್ರಾಯಗಳು ಅಥವಾ ಗೊಂದಲಗಳನ್ನು ಎಐಸಿಸಿ ಅಧ್ಯಕ್ಷರು ಸೂಚನೆ ಮೇರೆಗೆ ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ, ಈ ಭೇಟಿಯು ವೈಯಕ್ತಿಕವಾಗಿದೆ ಮತ್ತು ರಾಜಕೀಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಣ್ಣಿಸಿದರು.

‘ನಾನು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿಯಾದೆ. ಆದರೆ, ನಮ್ಮ ಸಂಬಂಧ ಬೇರೆಯೇ ಆಗಿದೆ. ನಮ್ಮದು ಕುಟುಂಬ ಸಂಬಂಧ. ಹಾಗಾಗಿ, ನಾನು ರಾಜಕೀಯದ ಬಗ್ಗೆ ಅಲ್ಲ, ಕುಟುಂಬದ ವಿಷಯಗಳ ಬಗ್ಗೆ ಚರ್ಚಿಸಿದೆ. ನಾನು ಅವರೊಂದಿಗೆ ರಾಜಕೀಯದ ಬಗ್ಗೆ ಒಂದು ಮಾತನ್ನೂ ಮಾತನಾಡಲಿಲ್ಲ’ ಎಂದು ಖರ್ಗೆ ಅವರನ್ನು ಭೇಟಿಯಾದ ನಂತರ ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದರು.

ಸ್ಥಳೀಯವಾಗಿಯೇ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳುವಂತೆ ಖರ್ಗೆ ರಾಜ್ಯದ ನಾಯಕರಿಗೆ ಸೂಚಿಸಿದ್ದಾರೆ. ‘ಅದು (ಕಾಂಗ್ರೆಸ್ ಮುಖ್ಯಸ್ಥರಿಂದ) ಬಂದ ಸಂದೇಶ. ಇದರ ಬಗ್ಗೆ ನಾನು ಏನು ಹೇಳಲಿ?. ನಮಗೆಲ್ಲರಿಗೂ ಅದು ತಿಳಿದಿರಬೇಕು, ನಾವೇ ನಮ್ಮ ಸಮಸ್ಯೆಗಳನ್ನು ಸ್ವತಃ ಪರಿಹರಿಸಿಕೊಳ್ಳಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಸಮಸ್ಯೆಗಳನ್ನು ನೀವೇ ಪರಿಹರಿಸಿಕೊಳ್ಳಿ ಮತ್ತು ಹೈಕಮಾಂಡ್‌ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.. ಹೀಗಾಗಿ, ನಾವೆಲ್ಲರೂ ಒಟ್ಟಿಗೆ ಕುಳಿತು ಪರಿಹರಿಸಿಕೊಳ್ಳಬೇಕು’ ಎಂದು ಅವರು ಹೇಳಿದರು.

error: Content is protected !!