ವಿಧಾನಪರಿಷತ್ ಚುನಾವಣೆ: ಜೆಡಿಎಸ್ ನಿಂದ ಅಭ್ಯರ್ಥಿಗಳ ಹೆಸರು ಘೋಷಣೆ

ಹೊಸದಿಗಂತ ವರದಿ,ಶಿವಮೊಗ್ಗ:

ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಕಣಕ್ಕಿಳಿಯಲಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಕಣಕ್ಕಿಳಿಯಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ
ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದೆ. ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಶ್ರೀಶೈಲ ನಿಂಗಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!