ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾಡಳಿತಕ್ಕೆ ಅಕ್ಟೋಬರ್ 28ರಂದು ಶಾಂತಿ ಸಭೆ ನಡೆಸಿ ವರದಿ ನೀಡುವಂತೆ ಕೋರ್ಟ್ ಸೂಚಿಸಿದೆ. ಇದರ ಬೆನ್ನಲ್ಲೇ ಆರ್ಎಸ್ಎಸ್, ಭೀಮ್ ಆರ್ಮಿ ಸೇರಿ 10 ಸಂಘಟನೆಗಳಿಗೆ ಜಿಲ್ಲಾಡಳಿತ ನೊಟೀಸ್ ಜಾರಿಗೊಳಿಸಿದೆ.
ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ವಿವಿಧ ಸಂಘಟನೆಗಳಿಂದ ಮನವಿ ಸಲ್ಲಿಸಲಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಜಿಲ್ಲಾಡಳಿತ ಅಕ್ಟೋಬರ್ 28ರಂದು ಬೆಳಗ್ಗೆ 11.30ಕ್ಕೆ ಶಾಂತಿ ಸಭೆಗೆ ಆಹ್ವಾನಿಸಿದೆ. ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ನಡೆಯಲಿದ್ದು, ಪ್ರತಿ ಸಂಘಟನೆಯಿಂದ ಮೂವರು ಸದಸ್ಯರು ಸಭೆಗೆ ಹಾಜರಾಗಿ ಲಿಖಿತ ಹೇಳಿಕೆ ಸಲ್ಲಿಸುವಂತೆ ಡಿಸಿ ಸೂಚಿಸಿದ್ದಾರೆ.

