ಹೊಸದಿಗಂತ ಡಿಜಿಟಲ್ ಡೆಸ್ಕ್:
ಫ್ರೊಫೆಸರ್ ಕಾರು ಡಿಕ್ಕಿಯಾದ ಪರಿಣಾಮ ಶಿಕ್ಷಕಿ ಸೇರಿದಂತೆ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿರುವ ಘಟನೆ ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದಲ್ಲಿ ನಡೆದಿದೆ.
ಇಂಗ್ಲೀಷ್ ಫ್ರೊಫೆಸರ್ ನಾಗರಾಜ್ ಎಂಬುವವರ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಅಶ್ವಿನಿ ಎಂಬ ವಿದ್ಯಾರ್ಥಿನಿ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮ್ಯೂಸಿಕ್ ಟೀಚರ್ ಜ್ಯೋತಿ ಎನ್ನುವವರಿಗೂ ಗಾಯಗಳಾಗಿದೆ ಎಂಬ ಮಾಹಿತಿ ದೊರೆತಿದೆ.
ಗಾಯಾಳುಗಳನ್ನು ಹತ್ತಿರದ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.