ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ನೀಡಿದೆ .
ಆದ್ರೆ ಅಲಿ ಖಾನ್ ವಿರುದ್ಧ ಹರಿಯಾಣ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ತಡೆಹಿಡಿಯಲು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರಿದ್ದ ಪೀಠ ನಿರಾಕರಿಸಿದೆ.ಪ್ರಕರಣದ ತನಿಖೆಗಾಗಿ ಐಜಿ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್ಐಟಿ)ವನ್ನು ರಚಿಸುವಂತೆ ಹರಿಯಾಣ ಡಿಜಿಪಿಗೆ ನಿರ್ದೇಶಿಸಿದೆ.
ಜಾಮೀನು ಬಾಂಡ್ಗಳನ್ನು ಒದಗಿಸಿದರೆ ಅರ್ಜಿದಾರರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಾವು ನಿರ್ದೇಶಿಸುತ್ತೇವೆ. ಎರಡೂ ಎಫ್ಐಆರ್ಗಳಿಗೆ ಒಂದೇ ಸೆಟ್ ಜಾಮೀನು ಬಾಂಡ್ಗಳು ಇರಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಅಷ್ಟೇ ಅಲ್ಲದೆ ಭಾರತ ಹಾಗೂ ಪಾಕಿಸ್ತಾನಕ್ಕೆ ಸಂಬಂಧಿಸಿದಂತಗೆ ಯಾವುದೇ ಪೋಸ್ಟ್ ಹಾಕಬೇಡಿ ಎಂದು ಕಟ್ಟು ನಿಟ್ಟಾಗಿ ಸೂಚಿಸಿದೆ.
ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿದಿನ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಸೋನಿಪತ್ ಪೊಲೀಸರು ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹಮೂದಾಬಾದ್ ಅವರನ್ನು ಬಂಧಿಸಿದ್ದರು.