ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….
ಹೊಸ ದಿಗಂತ ವರದಿ, ಮೈಸೂರು:
ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಹೆಚ್. ಜೆ.ಲಕ್ಕಪ್ಪಗೌಡ (84) ಅವರು ಸೋಮವಾರ ಸಂಜೆ ಮೈಸೂರಿನಲ್ಲಿ ವಿಧಿವಶರಾದರು.
ಇವರು ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ , ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ರಿಜಿಸ್ಟರ್ ಆಗಿ ಕಾರ್ಯನಿರ್ವಹಿಸಿದ್ದಾರೆ.
ಸಾಹಿತ್ಯದ ವಿವಿಧ ಪ್ರಕಾರದಲ್ಲಿ ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ದೇಜಗೌ ಮಾರ್ಗದರ್ಶನದಲ್ಲಿ ಶ್ರೀರಾಮಾಯಣ ದರ್ಶನಂ ಕೃತಿ ಕುರಿತು ಪಿ.ಹೆಚ್.ಡಿ ಪದವಿ ಪಡೆದಿದ್ದರು. ಹುಟ್ಟೂರು ಹಂಪಾಪುರ, ಅರಕಲಗೂಡು ತಾಲ್ಲೂಕು.
ಪತ್ನಿ ಕಮಲಮ್ಮ, ಪುತ್ರ ಎಚ್.ಎಲ್. ರವೀಂದ್ರಪ್ರಸಾದ್, ಪುತ್ರಿ ಡಾ.ಕಲಾ, ಮೊಮ್ಮಕ್ಕಳು ಇದ್ದಾರೆ. ಮೈಸೂರಿನ ಕುವೆಂಪುನಗರ ಅನಿಕೇತನ ರಸ್ತೆಯಲ್ಲಿರುವ ಮೃತರ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮೃತರ ಅಂತ್ಯಕ್ರಿಯೆ ಜುಲೈ 27 ರಂದು ಮೈಸೂರಿನಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ