ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಗತಿಪರ ಚಿಂತಕ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರಗುರು (68) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಪ್ರೊ.ಮಹೇಶ್ ಚಂದ್ರಗುರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಸಾವನ್ನಪ್ಪಿದ್ದಾರೆ.
ಮಹೇಶ್ ಚಂದ್ರಗುರು ಅವರು ಹೈದರಾಬಾದ್ನಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪ್ರಾಧ್ಯಾಪಕರಾದರು. ನಂತರ ಮೈಸೂರು ವಿಶ್ವವಿದ್ಯಾನಿಲಯಕ್ಕೆ ತೆರಳಿ 2019ರಲ್ಲಿ ನಿವೃತ್ತರಾದರು.