ನಿಷೇಧಿತ ಡ್ರಗ್ಸ್ ಮಾರಾಟ ಪ್ರಕರಣ: ಸಿಬಿಐಗೆ ತನಿಖೆ ವಹಿಸುವಂತೆ ಮಹಾ ಸರ್ಕಾರಕ್ಕೆ ಪತ್ರ

ಹೊಸದಿಗಂತ ವರದಿ,ಕಲಬುರಗಿ:

ನಿಷೇಧಿತ ಕೆಮ್ಮಿನ ಸಿರಪ್‌ನ ೧೨೦ ಬಾಟಲ್‌ (೨೭,೦೦೦ ರೂಪಾಯಿ ಮೌಲ್ಯದ್ದು) ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕಲಬುರಗಿ ದಕ್ಷಿಣ ಶಾಸಕ ಅಲ್ಲಂಪ್ರಭು ಪಾಟೀಲ್ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರದ ಮುಂಬೈನ ಠಾಣೆ ಜಿಲ್ಲೆಯ ಕಲ್ಯಾಣ ಪ್ರದೇಶದ ಬಜಾರ್‌ ಪೇಟ್‌ ಪೊಲೀಸ್‌ ಠಾಣೆಯಲ್ಲಿ ಜೂ.೨೨ರಂದು ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸತ್ಯಾಸತ್ಯತೆ ಹೊರಬರುವಂತಾಗಲು ಸದರಿ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರವರ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ

ಕಳೆದ ಜೂ.೨೨ರಂದು ಕಲ್ಯಾಣದಲ್ಲಿ ನಡೆದ ಬೆಳವಣಿಗೆಯಲ್ಲಿ ೨೭ ಸಾವಿರ ರುಪಾಯಿ ಮೌಲ್ಯದ ನಿಷೇಧಿತ ಕೆಮ್ಮಿನ ಸಿರಪ್‌ ಸಾಗಾಟದ ಪ್ರಕರಣದಲ್ಲಿ ಕಲಬುರಗಿ ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಲಿಂಗರಾಜ ಕಣ್ಣಿ ಇವರ ಮೇಲೆ ಆರೋಪ ಕೇಳಿ ಬಂದಿತ್ತಲ್ಲದೆ, ಇವರ ಬಂಧನವಾಗಿತ್ತು. ಬಂಧನದ ನಂತರ ಕಣ್ಣಿ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ಇದೇ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಬರಲಿ, ಸಿಬಿಐ ತನಿಖೆಯೂ ಆಗಲಿ, ಸರ್ಕಾರಕ್ಕೆ ಪತ್ರ ಬರೆಯುವೆ ಎಂದು ನಾನು ಹೇಳಿದ್ದೆ.ನನ್ನ ಮಾತಿನಂತೆ ನಾನೀಗ ಮಹಾರಾಷ್ಟ್ರ ಸರ್ಕಾರಕ್ಕೆ, ಅಲ್ಲಿನ ಮುಖ್ಯಮಂತ್ರಿ ದೇವೀಂದ್ರ ಫಡ್ನವೀಸ್‌ ಅವರಿಗೆ ಪತ್ರ ಬರೆದಿರುವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ರಾಜ್ಯ ಸರ್ಕಾರಕ್ಕೂ ಪತ್ರ ಬರೆದು ಸದರಿ ಪ್ರಕರಣ ಗಮನಕ್ಕೆ ತಂದಿರುುದಾಗಿ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!