ಗಣಕಯಂತ್ರ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

ದಿಗಂತ ವರದಿ ಮಡಿಕೇರಿ:

ಜಿಲ್ಲೆಯಲ್ಲಿ ಜ. 31 ಮತ್ತು ಫೆಬ್ರವರಿ 1 ರಂದು ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ನಗರದ ಶ್ರೀ ಸದ್ಗುರು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.
ಈ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆ ಸಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ.
ಹಾಗೆಯೇ ಈ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮತ್ತು ಸೈಬರ್ ಕೆಫೆಗಳನ್ನು ಮುಚ್ಚಿಸಲು ಸಹಾ ಆದೇಶಿಸಿದೆ.
ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!