ರಾಷ್ಟ್ರ ವಿಭಜಕ ಶಕ್ತಿಗಳ ನಿಷೇಧ ಸ್ವಾಗತಾರ್ಹ: ಕೇಂದ್ರದ ನಿರ್ಧಾರವನ್ನು ಅಭಿನಂದಿಸಿದ ಸಿ.ಟಿ.ರವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು:
ದೇಶ ವಿಭಜಕ ಶಕ್ತಿಗಳನ್ನು ಸರಕಾರ ನಿಷೇಧ ಮಾಡಿರುವುದು ಸ್ವಾಗತಾರ್ಹ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಪಿಎಫ್‍ಐ ನಿಷೇಧ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಐಸಿಸ್ ಮಾದರಿಯ ಉಗ್ರಗಾಮಿಗಳನ್ನ ಬೆಂಬಲಿಸಿದ, ದೇಶದ ಒಳಗೆ ಅಭದ್ರತೆ, ಅಂತರ್ಯುದ್ಧದ, ದೇಶದ್ರೋಹದ ಸಂಚನ್ನು ಮಾಡುತ್ತಿದ್ದ ಪಿಎಫ್ಐ ಹಾಗೂ ಅದರ ಸಹ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಹಾಗೂ ಸರಕಾರವನ್ನು ಅಭಿನಂದಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಸರಕಾರ ಈ ಸಂಘಟನೆಗಳನ್ನು ಬ್ಯಾನ್ ಮಾಡಿದೆ, ಇಷ್ಟು ಸಾಕಾಗುವುದಿಲ್ಲ. ಸಮಾಜವು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ. ವಿದ್ರೋಹಿ ಹಾಗೂ ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕಾಗಿದೆ. ನಿಷೇಧವನ್ನು ಬಳಸಿಕೊಂಡು ಯಾವ ರಾಜಕೀಯ ಪಕ್ಷವೂ ತುಷ್ಟೀಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ದೃಷ್ಟಿಯಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.
ರಾಜಕೀಯವಾಗಿ ನಿಮಗೆ ಲಾಭ ಕೊಟ್ಟರೂ, ದೇಶದ ಭವಿಷ್ಯದ ದೃಷ್ಟಿಯಿಂದ, ಸಮಾಜವನ್ನು ಈ ದುಷ್ಟ ಶಕ್ತಿಗಳ ಕೈಯಿಂದ ಬಿಡಿಸುವ ಕಾರ್ಯದಲ್ಲಿ ತೊಡಕಾಗಲಿದೆ. ದೇಶದ ಭದ್ರತೆಯ, ಸಮಾಜದ ಗೌರವ ಕಾಪಾಡುವ ನಿಟ್ಟಿನಲ್ಲಿ, ದೇಶಪ್ರೇಮಿ ಮುಸ್ಲಿಮರು ಯೋಚನೆ ಮಾಡಬೇಕಾದ ಅಗತ್ಯವಿದೆ. ಮತ್ತು ರಾಷ್ಟ್ರ ವಿರೋಧಿ ಹಾಗೂ ಮತಾಂಧತೆಯ ವಿರುದ್ಧ ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ನಿಷೇಧದ ನಂತರ ಪಿಎಫ್ಐ ಸಂಘಟನೆಗೆ ಸೇರಿದ ದುಷ್ಟ ಶಕ್ತಿಗಳು ಭೂಗತರಾಗಿ ಕಾರ್ಯನಿರ್ವಹಿಸುವ, ಸಮಾಜವನ್ನು. ಪ್ರಚೋದಿಸುವ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇದ್ದು, ಇಂತಹ ಯಾವುದೇ ಘಟನೆಗಳು ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಮುಂದಾಗುವ ಸಮಸ್ಯೆಗಳನ್ನು ತಪ್ಪಿಸಲು ಕಾನೂನಿನ ಜೊತೆ ಕೈ ಜೋಡಿಸಲು ಅವರು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!