ಹರಿದ್ವಾರದ ಮಹಾಪಂಚಾಯತ್‌ಗೆ ನಿಷೇಧ: 144 ಸೆಕ್ಷನ್‌ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರಾಖಂಡ ರಾಜ್ಯದ ಹರಿದ್ವಾರದ ದಾದಾ ಜಲಾಲ್‌ಪುರ ಪ್ರದೇಶದಲ್ಲಿ ಹಿಂದೂ ಧಾರ್ಮಿಕ ಮುಖಂಡರು ʼಮಹಾಪಂಚಾಯತ್‌ʼಗೆ ಕರೆ ನಿಡಿದ ಬೆನ್ನಲ್ಲೇ ಅದನ್ನು ನಿಷೇಧಿಸಿ ಹರಿದ್ವಾರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದಾದಾ ಜಲಾಲ್‌ಪುರ ಮತ್ತು ಸುತ್ತಲಿನ 5 ಕಿಲೋಮೀಟರ್‌ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಈ ಕುರಿತು ಹರಿದ್ವಾರದ ಜಿಲ್ಲಾ ದಂಡಾಧಿಕಾರಿ ವಿಎಸ್‌ ಪಾಂಡೆ ಪ್ರತಿಕ್ರಿಯಿಸಿದ್ದು “ದಾದಾ ಜಲಾಲ್‌ಪುರ ಮತ್ತು ಸುತ್ತಲಿನ 5 ಕಿಲೋಮೀಟರ್‌ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮತ್ತು ಎಲ್ಲಾ ಸಾರ್ವಜನಿಕ ಸಮಾರಂಭಗಳನ್ನು ನಿಷೇಧಿಸಲಾಗಿದೆ. ಈ ಕಾರ್ಯಕ್ರಮಕ್ಕೆ (ಮಹಾಪಂಚಾಯತ್)‌ ಯಾವುದೇ ಅನುಮತಿ ತೆಗೆದುಕೊಳ್ಳಲಾಗಿಲ್ಲ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ 33 ಜನರನ್ನು ಸಿಆರ್‌ಪಿಸಿ ಸೆಕ್ಷನ್‌ 107/16 ಅಡಿಯಲ್ಲಿ ಬಂಧಿಸಲಾಗಿದೆ” ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಏಪ್ರಿಲ್‌ 16ರಂದು ಭಗವಾನ್‌ ಪುರದಲ್ಲಿ ನಡೆದ ಕಲ್ಲು ತೂರಾಟದ ಬಗ್ಗೆ ಚರ್ಚಿಸಲಾಗುತ್ತಿತ್ತು ಎಂದು ಆರೋಪಿಸಿ ಜಿಲ್ಲಾಡಳಿತವು ಅನುಮತಿಯನ್ನು ನಿರಾಕರಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!