ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಮಿಲಿಟರಿ ಸಿಬ್ಬಂದಿಯನ್ನು ಅವಮಾನಿಸುವುದನ್ನು ನಿಷೇಧಿಸುವ ಮಸೂದೆಗೆ ಚೀನಾ ಅನುಮೋದನೆ ನೀಡಿದೆ.
ಚೀನಾದ ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್ನ (ಎನ್ಪಿಸಿ) ಸ್ಥಾಯಿ ಸಮಿತಿ ಮಂಡಿಸಿದ ಈ ಮಸೂದೆಗೆ ಅನುಮೋದನೆ ನೀಡಲಾಗಿದ್ದು, ಈ ಮೂಲಕ ಯಾವುದೇ ವ್ಯಕ್ತಿ ಅಥವಾ ಸಂಘಟನೆ ಯಾವುದೇ ರೀತಿಯಲ್ಲಿ ಮಿಲಿಟರಿ ಸಿಬ್ಬಂದಿಯನ್ನು ಅವಮಾನಿಸುವುದನ್ನು, ಅವರ ಗೌರವಕ್ಕೆ ಧಕ್ಕೆ ತರುವುದನ್ನು ನಿಷೇಧಿಸುತ್ತದೆ ಎಂದು ಸರ್ಕಾರಿ ಒಡೆತನದ ಸುದ್ದಿಸಂಸ್ಥೆ ಷಿನ್ಹುವಾ ವರದಿ ಮಾಡಿದೆ.
ಇದರ ಜೊತೆಗೆ ಮಿಲಿಟರಿ ಸಿಬ್ಬಂದಿಗೆ ಗೌರವಾರ್ಥವಾಗಿ ನೀಡಿರುವ ಪದಕಗಳನ್ನು ಅವಮಾನಿಸುವುದನ್ನು ಸಹ ಹೊಸ ಮಸೂದೆ ನಿಷೇಧಿಸಿದ್ದು, ಈಗಾಗಲೇ ಜಾರಿಯಲ್ಲಿದ್ದ ಕಾಯ್ದೆಯನ್ನು ಈ ಮಸೂದೆ ಮೂಲಕ ಮತ್ತಷ್ಟು ಕಠಿಣಗೊಳಿಸಲಾಗಿದೆ.