Friday, June 9, 2023

Latest Posts

ಪ್ರಾಜೆಕ್ಟ್ ಟೈಗರ್‌ಗೆ 50 ವರ್ಷದ ಸಂಭ್ರಮ : ಮೈಸೂರಿನಲ್ಲಿ ಮೂರು ದಿನಗಳ ಮೆಗಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಪ್ರಾಜೆಕ್ಟ್ ಟೈಗರ್‌ಗೆ 50 ವರ್ಷಗಳ ಸ್ಮರಣಾರ್ಥ ಮೈಸೂರಿನಲ್ಲಿ ಮೂರು ದಿನಗಳ ಮೆಗಾ ಕಾರ್ಯಕ್ರಮವನ್ನು ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಪ್ರಾಜೆಕ್ಟ್ ಟೈಗರ್‌ನ 50 ವರ್ಷಗಳ ಸ್ಮರಣಾರ್ಥವಾಗಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಮೆಗಾ ಈವೆಂಟ್ ನಡೆಯಲಿದೆ. ಏಪ್ರಿಲ್ 9,2023 ರಂದು ಮೈಸೂರಿನಲ್ಲಿ ನಡೆಯುವ ಮೆಗಾ ಕಾರ್ಯಕ್ರಮದ ಉದ್ಘಾಟನಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಯವರನ್ನು ಕೋರಲಾಗಿದೆ.” ಎಂದು ಪರಿಸರ ಸಚಿವಾಲಯದ ಅಧಿಕಾರಿಯೊಬ್ಬರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಧಿಕಾರಿ, ಉದ್ದೇಶಿತ ಕಾರ್ಯಕ್ರಮವು ವನ್ಯಜೀವಿ ಸಂರಕ್ಷಣೆಗೆ ಭಾರತದ ಬದ್ಧತೆಯ ಸಂದೇಶವನ್ನು ತಿಳಿಸುತ್ತದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!