ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ದಸರಾ ನಮಗೆ ದೊಡ್ಡ ಹಬ್ಬ. ಆಯುಧಪೂಜೆಯ ದಿನ ಈ ದುರಂತ ನಡೆಯಬಾರದಿತ್ತು. ರೈಲಿನಲ್ಲಿ ಒಟ್ಟು 994 ಪ್ರಯಾಣಿಕರಿದ್ದರು. ಮೈಸೂರಿನಿಂದ 180ಕ್ಕೂ ಹೆಚ್ಚು ಪ್ರಯಾಣಿಕರು ಆಗಮಿಸಿದ್ದರು. ಚೆನ್ನೈ ಇನ್ನೂ 30 ಕಿ.ಮೀ ದೂರವಿತ್ತು. ಹಳಿಯಲ್ಲಿ ನಿಂತಿದ್ದ ಸರಕು ಸಾಗಣೆ ರೈಲಿಗೆ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದರು.
ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ರಕ್ಷಣಾ ತಂಡ ಈಗಾಗಲೇ ಸ್ಥಳಕ್ಕೆ ಧಾವಿಸಿದೆ. ರೈಲ್ವೆ ಅಧಿಕಾರಿಗಳು ಕೂಡ ಸ್ಥಳಕ್ಕೆ ತೆರಳಿದ್ದಾರೆ. ಸದ್ಯದವರೆಗೆ ಯಾವುದೇ ಸಾವು-ನೋವು ಆಗಿಲ್ಲ. ರೈಲ್ವೆ ವಿಭಾಗಗಳಿಂದ ಸಹಾಯವಾಣಿ ಕೂಡ ಬಿಡುಗಡೆ ಮಾಡಲಾಗಿದೆ. ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.