ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಕೊಕ್ರಜಾರ್ ಜಿಲ್ಲೆಯ ಮಾರುಕಟ್ಟೆ ಪ್ರದೇಶದಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಸುಟ್ಟು ಭಸ್ಮವಾಗಿವೆ.
“ಕೊಕ್ರಜಾರ್ ಜಿಲ್ಲೆಯ ಗೊಸ್ಸೈಗಾಂವ್ ಬಳಿಯ ಹೌರಿಯಾಪೇಟ್ ಮಾರುಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ 12-15 ಅಂಗಡಿಗಳು ಮತ್ತು ವ್ಯಾಪಾರ ಮಳಿಗೆಗಳು ಬೆಂಕಿಗೆ ಆಹುತಿಯಾಗಿವೆ” ಎಂದು ಹೌರಿಯಾಪೇಟ್ ಮಾರುಕಟ್ಟೆ ನಿರ್ವಹಣಾ ಸಮಿತಿಯ ಅಧ್ಯಕ್ಷ ನೂರ್ ಮೊಹಮ್ಮದ್ ಹೇಳಿದ್ದಾರೆ.
ಅಗ್ನಿಶಾಮಕ ದಳ ಮತ್ತು ಸ್ಥಳೀಯ ಆಡಳಿತ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಬೆಂಕಿಗೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ಇದೆ ಎಂದು ನೂರ್ ಹೇಳಿದರು.
ಈ ಬಗ್ಗೆ ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.