ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಡಿಕೆಶಿ ವಿರುದ್ದದ ಅರ್ಜಿ ವಿಚಾರಣೆ ಮೇ ಅಂತ್ಯಕ್ಕೆ‌‌ ಮುಂದೂಡಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​​ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಮೇ ಅಂತ್ಯಕ್ಕೆ‌‌ ಹೈಕೋರ್ಟ್ ಮುಂದೂಡಿದೆ.

ಮುಂದಿನ ವಿಚಾರಣೆವರೆಗೆ ಸಿಬಿಐ ತನಿಖೆಗೆ ತಡೆಯಾಜ್ಞೆ ವಿಸ್ತರಣೆ ಮಾಡಲಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷರು ಹೈಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧದ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸುತ್ತಾ ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಿತ್ತು. ಇದೀಗ ಮತ್ತೆ ವಿಸ್ತರಣೆಗೊಂಡಿದೆ, ಆದರೆ ವಿಚಾರಣೆ ಅಂತ್ಯಗೊಂಡಿದ್ದು, ತೀರ್ಪು ಕಾಯ್ದಿರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!