ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್ ತನಿಖೆಗೆ ತಡೆಯಾಜ್ಞೆ ಮತ್ತೆ ವಿಸ್ತರಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ತನಿಖೆಗೆ ಇದ್ದ ತಡೆಯಾಜ್ಞೆ ಮತ್ತೆ ಮುಂದೂಡಿಕೆಯಾಗಿದೆ.

ಸಿಬಿಐ ತನಿಖೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ (Karnataka High Court), ತಡೆಯಾಜ್ಞೆಯನ್ನು ಏಪ್ರಿಲ್‌ 17ರವರೆಗೆ ವಿಸ್ತರಿಸಿದೆ.

ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆ ಶಿವಕುಮಾರ್ ಅವರಿಗೆ ಆರಂಭದಲ್ಲಿ ಬಿಗ್ ರಿಲೀಫ್ ಸಿಕ್ಕಿತ್ತು. ಫೆ.24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ತನಿಖಾಧಿಕಾರಿ ತನಿಖೆಯ ಪ್ರಗತಿ ವರದಿ ಹಾಜರುಪಡಿಸಲಿ. ಫೆಬ್ರವರಿ 24ರ ಒಳಗೆ ತನಿಖೆ ವರದಿ ಸಲ್ಲಿಸಲಿ. ಅಲ್ಲಿಯವರೆಗೆ ತನಿಖೆ ಮುಂದುವರಿಸದಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಬಳಿಕ ನಡೆದ ವಿಚಾರಣೆ ವೇಳೆ ಕೋರ್ಟ್, ಮಾರ್ಚ್‌ 31ಕ್ಕೆ ಅರ್ಜಿ ವಿಚಾರನೆ ಮುಂದೂಡಿತ್ತ, ನಂತರ ಏಪ್ರಿಲ್ 6ಕ್ಕೆ ಮುಂದೂಡಲಾಗಿತ್ತು. ಬಳಿಕ ಏಪ್ರಿಲ್ 13ಕ್ಕೆ ಮುಂದೂಡಿಕೆಯಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!