ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹಮದ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ರದ್ದು ಕೋರಿ ಸಚಿವ ಜಮೀರ್ ಅಹಮದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ವಜಾಗೊಳಿಸಿ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ.

80.44 ಕೋಟಿ ಆದಾಯ ಮೀರಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಮೀರ್ ವಿರುದ್ಧ ಎಸಿಬಿ ಕೇಸ್ ದಾಖಲಿಸಿತ್ತು. 80.44 ಕೋಟಿ ರೂ. ಮೌಲ್ಯದ ಆದಾಯ ಮೀರಿ ಅಕ್ರಮ ಆಸ್ತಿ ಮಾಡಿದ ಆರೋಪ ಜಮೀರ್ ಅಹ್ಮದ್ ಮೇಲಿದೆ. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ACB) ಪ್ರಕರಣ ದಾಖಲಿಸಿತ್ತು. ಪ್ರಕರಣ ರದ್ದುಗೊಳಿಸುವಂತೆ ಜಮೀರ್ ಅಹ್ಮದ್ ಅರ್ಜಿ ಸಲ್ಲಿಸಿದ್ದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!