ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತನಿಖೆಗೆ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಸಿಬಿಐ ತನಿಖೆಗೆ (CBI Investigation) ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (High Court Of Karnataka), ತನಿಖೆಗೆ ಇದ್ದ ತಡೆಯಾಜ್ಞೆಯನ್ನು ಏಪ್ರಿಲ್‌ 13ರವರೆಗೆ ವಿಸ್ತರಿಸಿದೆ.

ಸಿಬಿಐ ತನಿಖೆಗೆ ಅನುಮತಿ ಹಾಗೂ ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್​ಗೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ಸದ್ಯ ವಿಚಾರಣೆ ನಡೆಸಿದ ಕೋರ್ಟ್ ಎರಡೂ ಅರ್ಜಿಗಳ ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!