ರಾಜ್ಯಾದ್ಯಂತ ಆಸ್ತಿ ನೋಂದಣಿಗೆ ಮಾರ್ಗಸೂಚಿ ದರದಲ್ಲಿ 10% ರಿಯಾಯತಿ: ಕಂದಾಯ ಸಚಿವ ಅಶೋಕ್

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಜನರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ನೋಂದಣಿಗೆ ಕಂದಾಯ ಇಲಾಖೆ ವಿಶೇಷ ರಿಯಾಯತಿ ಪ್ರಕಟಿಸಿದೆ.

ಇಂದು ಮಾಧ್ಯಮದೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಹೊಸ ವರ್ಷದ ಮೋದಲ ದಿನವೇ ಸರಕಾರ ಈ ರಿಯಾಯಿತಿಯನ್ನು ಜನರ ಅನುಕೂಲಕ್ಕಾಗಿ ನೀಡುತ್ತಿದೆ. ಇಂದಿನಿಂದಲೇ ಈ ಸೌಲಭ್ಯವನ್ನು ಜನರು ಪಡೆದುಕೊಳ್ಳಬಹುದು ಎಂದು ಹೇಳಿದರು.

ಈ ರಿಯಾಯಿತಿಯಿಂದ ಸರಕಾರಕ್ಕೆ ಆರ್ಥಿಕವಾಗಿ ಸ್ವಲ್ಪ ಆದಾಯ ಕಡಿಮೆ ಆಗಬಹುದು. ಆದರೆ ಲಕ್ಷಾಂತರ ಜನರಿಗೆ ಇದು ಅನುಕೂಲವಾಗುತ್ತದೆ. ಎಷ್ಟೋ ರೈತರು ಅಗ್ರಿಮೆಂಟ್, ಜಿಪಿಎ ಮಾಡಿಕೊಂಡಿದ್ದರು. ಅವರೆಲ್ಲ ಈಗ ಆಸ್ತಿ ನೋಂದಣಿ ಮಾಡಿಕೊಳ್ಳಬಹುದು ಎಂದು ಸಚಿವರು ತಿಳಿಸಿದರು.

ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನಗಳು, ಕಟ್ಟಡಗಳು, ಅಪಾರ್ಟ್‌ಮೆಂಟ್ ಹಾಗೂ ಇತರ ಎಲ್ಲ ರೀತಿಯ ಸ್ಥಿರಾಸ್ತಿಗಳ ನೋಂದಣಿಗೆ ಮಾರ್ಗಸೂಚಿ ದರವನ್ನು ಶೇ. 10ರಷ್ಟು ಕಡಿತಗೊಳಿಸಲಾಗಿದೆ. ಈ ರಿಯಾಯಿತಿ 2022 ಜನವರಿ 1ರಿಂದ ಮಾರ್ಚ್ 31ರವರೆಗೆ ಮಾತ್ರ ಲಭ್ಯ ಇರುತ್ತದೆ ಎಂದು ಸಚಿವ ಆರ್. ಅಶೋಕ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!