ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನಾತ್ಮಕ ತನಿಖೆ ನಡೆಸುವ ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಈ ತನಿಖೆಗೆ ತಡೆ ತರದಂತೆ ಕೇವಿಯಟ್ ತರಲು ದೂರುದಾರರು ಮುಂದಾಗಿದ್ದಾರೆ.
ಇದಕ್ಕೆ ತಡೆ ನೀಡದಂತೆ ಕೇವಿಟ್ ಅನ್ನು ಹೈಕೋರರ್ಟ್ ಗೆ ಸಲ್ಲಿಸುವುದಾಗಿ ದೂರುದಾರ ಟಿಜೆ ಅಬ್ರಹಾಂ ತಿಳಿಸಿದ್ದಾರೆ.
ಇಂದು ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೂರುದಾರ ಹಾಗೂ ಸಾಮಾಜಿಕ ಹೋರಾಟಗಾರ ಟಿ.ಜೆ ಅಬ್ರಾಹಂ ಅವರು, ಸೋಮವಾರ ಕೇವಿಟ್ ಅನ್ನು ಕೋರ್ಟ್ ಗೆ ಸಲ್ಲಿಸಲಾಗುತ್ತದೆ ಎಂದರು.
ರಾಜಕೀಯ ಆರೋಪಗಳಿಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಾವು ಕೇಳಿಲ್ಲ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಎಂದು ಕೇಳಿದ್ದೇವೆ. ನಮ್ಮ ಮನವಿಯಂತೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ ಎಂದು ತಿಳಿಸಿದರು.