ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರ ಆ.19ರಂದು ನಿಗದಿಯಾಗಿದ್ದ ಬಳ್ಳಾರಿ ಜಿಲ್ಲಾ ಪ್ರವಾಸ ಮತ್ತು ಮಂತ್ರಾಲಯ ಭೇಟಿ ಕಾರ್ಯಕ್ರಮಗಳು ರದ್ದಾಗಿದೆ. ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸಲು ನಾಳಿನ ಕಾರ್ಯಕ್ರಮಗಳನ್ನು ಸಿಎಂ ರದ್ದು ಮಾಡಿದ್ದಾರೆ.
ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಸಿಎಂ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಅಲ್ಲದೇ ನಾಳೆ ಹೈಕೋರ್ಟ್‌ನಲ್ಲಿ ಸಿಎಂ ಪರವಾಗಿ ಅಭಿಷೇಕ್ ಮನು ಸಿಂಘ್ವಿ, ಕಪಿಲ್ ಸಿಬಲ್ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ನಾಳೆ ಬೆಳಗ್ಗೆ ಬೆಂಗಳೂರಿಗೆ ಸಿಂಘ್ವಿ ಮತ್ತು ಸಿಬಲ್ ಆಗಮಿಸಲಿದ್ದಾರೆ. ಸೋಮವಾರ ಬೆಳಗ್ಗೆ ವಕೀಲರ ಜೊತೆಗೆ ಸಿಎಂ ಸಿದ್ದರಾಮಯ್ಯ ಸುದೀರ್ಘ ಚರ್ಚೆ ಹಿನ್ನೆಲೆಯಲ್ಲಿ ನಾಳಿನ ಬಳ್ಳಾರಿ ಜಿಲ್ಲೆ ಮತ್ತು ಮಂತ್ರಾಲಯ ಭೇಟಿಯನ್ನು ಸಿಎಂ ರದ್ದು ಮಾಡಿದ್ದಾರೆ.