ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾದಲ್ಲಿ ಸೈಟ್ ಪಡೆದ ವಿಚಾರವಾಗಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಇದೇ ಪ್ರಾಸಿಕ್ಯೂಷನ್ ಆದೇಶದ ವಿರುದ್ದ ಇಡೀ ಸಂಪುಟವೇ ತಿರುಗಿ ಬಿದ್ದಿದೆ. ಬಿಜೆಪಿ ಹೇಳಿದ್ದನ್ನೇ ಮಾಡುತ್ತಿದ್ದಾರೆ ಎಂದು ನೇರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ದ ಕಿಡಿಕಾರಿದ್ದಾರೆ.
ಇದರ ಬೆನ್ನಲ್ಲೇ ಸಿದ್ದರಾಮಯ್ಯ, ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಈ ಮೂಲಕ ಶಾಸಕರ ವಿಶ್ವಾಸ ಪಡೆಯಲು ಮುಂದಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಆ.21) ಶಾಸಕಾಂಗ ಸಭೆ ಕರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಕ್ಷದ ಶಾಸಕರ ಬೆಂಬಲವಿದೆ. ಹೀಗಾಗಿ ವಿಶ್ವಾಸ ಗಳಿಸಲು ಶಾಸಕರ ಸಭೆ ಕರೆದಿದ್ದಾರೆ. ಈ ಘಟನೆಯ ಸಂಪೂರ್ಣ ಬೆಳವಣಿಗೆಯನ್ನು ಶಾಸಕರಿಗೆ ಮನವರಿಕೆ ಮಾಡಲು ಅವರು ಯೋಜಿಸಿದ್ದಾರೆ.