ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಚುನಾವಣೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಸಾಧಿಸಿದ್ದಾರೆ. ಜನರ ಈ ತೀರ್ಪಿಗೆ ಕಾಂಗ್ರೆಸ್ ಪಕ್ಷ ಕೃತಜ್ಞತೆ ವ್ಯಕ್ತಪಡಿಸಿದೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಬರೆದಿದ್ದಾರೆ.
ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ “ಕೈ” ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗಮನಾರ್ಹ ಮುನ್ನಡೆ ಕಾಯ್ದುಕೊಂಡು ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಕೂಡ ಗೆಲುವು ಸಾಧಿಸಿದ್ದಾರೆ.
ಫಲಿತಾಂಶಕ್ಕೂ ಮುನ್ನ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಮೂರೂ ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಾಯಕರು ಕೂಡ ಎನ್‌ಡಿಎ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.