ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವಾಸಿಗರ ವಸತಿಯ ಉದ್ದೇಶಕ್ಕೆಂದು ನಿರ್ಮಿಸಲಾಗಿದ್ದ ಹೋಟೆಲ್‌ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದು, ಪೊಲೀಸರು ದಾಳಿ ಮಾಡಿ 7 ಮಂದಿ ಆರೋಪಿಗಳನ್ನು ಬಂಧಿಸಿದ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ.
ಈ ಸಂದರ್ಭದಲ್ಲಿ 5 ಮಂದಿ ಯುವತಿಯರನ್ನು ರಕ್ಷಣೆ ಮಾಡಿದ್ದು, ರಕ್ಷಣೆ ಮಾಡಲ್ಪಟ್ಟ ಎಲ್ಲ ಯುವತಿಯರು ನೇಪಾಳ ದೇಶ ಹಾಗೂ ಜಾರ್ಖಂಡ್ ರಾಜ್ಯದವರು ಎಂದು ಗುರುತಿಸಲಾಗಿದೆ.
ಸೆಕ್ಟರ್ 13ರ ಆಕ್ಸೊ ಇನ್ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ 7 ಯುವಕರು ಬಂಧಿಸಲಾಗಿದ್ದು, 5 ಯುವತಿಯರ ರಕ್ಷಣೆ ಮಾಡಲಾಗಿದ್ದು, ಯುವತಿಯನ್ನು ಸದ್ಯಕ್ಕೆ ಮಹಿಳಾ ಸಾಂತ್ವನ ಕೇಂದ್ರಗಳಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಅಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.