ಹೊಸದಿಗಂತ ವರದಿ, ಮೈಸೂರು:
ಮೈಸೂರು: ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನ್ನು ಬಂಧಿಸಿರುವ ಮೈಸೂರಿನ ಪೊಲೀಸರು ಇಬ್ಬರು ಮಹಿಳೆಯರ ರಕ್ಷಣೆ ಮಾಡಿದ್ದಾರೆ.
ಸಂಘಟತ ಅಪರಾಧ ಮತ್ತು ರೌಡಿ ಪ್ರತಿಬಂಧಕ ದಳ ಮತ್ತು ವಿಜಯನಗರ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ವಿಜಯನಗರ 4ನೇ ಹಂತದಲ್ಲಿನ ಮನೆ ಮೇಲೆ ದಾಳಿ ಮಾಡಿ, ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಇದೇ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದು, ವೇಶ್ಯಾವಾಟಿಕೆಗೆ ಬಳಕೆಯಾಗಿದ್ದ 31,500 ರೂ ನಗದು ಹಣ, ಒಂದು ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬAಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.