ಹೊಸದಿಗಂತ ವರದಿ, ಮಡಿಕೇರಿ:
ವೀರಾಜಪೇಟೆ ಪಟ್ಡಣದಲ್ಲಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಮೂವರ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ರಾಜ್ಯಸ ಕಣ್ಣೂರಿನ ಪ್ರದೀಪನ್.ಪಿ.ಪಿ( 48), ಕಲೇಶ್ ಕುಮಾರ್ (45), ಶಾಜಿ (38) ಹಾಗೂ ವೀರಾಜಪೇಟೆ ತಾಲೂಕಿನ ಅಮ್ಮತ್ತಿ ನಿವಾಸಿ ನೆಲ್ಲಮಕ್ಕಡ ಎ.ಪೊನ್ನಣ್ಣ (48) ಬಂಧಿತ ಆರೋಪಿಗಳು.
ವೀರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿನ ಆರೆಂಜ್ ಫ್ಯಾಮಿಲಿ ಬ್ಯೂಟಿ ಪಾರ್ಲರ್ & ಸ್ಪಾ ಎಂಬ ಹೆಸರಿನಲ್ಲಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ದೊರೆತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಸೇರಿಸಿದ್ದಾರೆ. ಹಾಗೂ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೇಲಿನ ಆರೋಪಿಗಳ ಮೇಲೆ ವೀರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 3, 4, 5(ಸಿ), 7 Immortal Traffic (Prevention) Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ವೀರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಎಸ್ ಮಹೇಶ್ ಕುಮಾರ್, ವೃತ್ತ ನಿರೀಕ್ಷಕ ಪಿ.ಅನೂಪ್ ಮಾದಪ್ಪ, ವೀರಾಜಪೇಟೆ ನಗರ ಠಾಣೆ ಪಿಎಸ್ಐ ಪ್ರಮೋದ್, ವೀರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್ಐ ಲತಾ.ಎನ್.ಜೆ ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕಷಕ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ.