ಸಿಎಂ ಕಚೇರಿ ಘನತೆ ಕಾಪಾಡಿ, ಈ ಕೂಡಲೇ ರಾಜೀನಾಮೆ ನೀಡಿ: ವಿಜಯೇಂದ್ರ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಡಾ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಕಾರಣ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದರ ಪ್ರತಿಯನ್ನು ಲಗತ್ತಿಸಿ ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಕಚೇರಿಯ ಘನತೆ ಕಾಪಾಡಬೇಕು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ವಿರುದ್ಧದ ಮುಡಾ ಹಗರಣದ ದೂರಿನ ಮೇಲೆ ಕಾನೂನು ಕ್ರಮಕ್ಕೆ ಅಧಿಕಾರ ನೀಡಲು ರಾಜ್ಯಪಾಲರು ತಮ್ಮ ಸಾಂವಿಧಾನಿಕ ಅಧಿಕಾರವನ್ನು ಚಲಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಅಕ್ರಮಗಳ ಬಗ್ಗೆ ಸಾಕಷ್ಟು ಪುರಾವೆಗಳು ಇವೆ.

ಗಂಭೀರ ಆರೋಪಗಳು ಕೇಳಿಬಂದಿರುವ ಕಾರಣ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ನಿರ್ಣಾಯಕವಾಗಿದೆ. ಅವರು ರಾಜೀನಾಮೆ ನೀಡಿ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಿ, ಮುಖ್ಯಮಂತ್ರಿ ಕಚೇರಿಯ ಘನತೆ ಕಾಪಾಡಬೇಕಿದೆ. ಅವರಿಗೆ ನ್ಯಾಯ ಸಿಗುತ್ತದೆ’ ಎಂದು ವಿಜಯೇಂದ್ರ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!