spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಪೋರ್ಟರ್-9 ನೌಕೆಯಿಂದ ರಕ್ಷಿಸಲ್ಪಟ್ಟ 9 ಜನರ ಪೈಕಿ 5 ಮಂದಿಗೆ ಕೊರೋನಾ ಪಾಸಿಟಿವ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಮಂಗಳೂರು:

ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೀಡಾಗಿದ್ದ ಕೋರಮಂಡಲ್ ಸಪೋರ್ಟರ್-9 ನೌಕೆಯಿಂದ ರಕ್ಷಿಸಲ್ಪಟ್ಟ 9 ಜನರ ಪೈಕಿ 5 ಮಂದಿಗೆ ಕೊರೋನಾ ಬಾಧಿಸಿದೆ.
ತೌಕ್ತೆ ಚಂಡಮಾರುತದಿಂದ ಕೋರಮಂಡಲ ಮಿನಿ ನೌಕೆ ಸಮುದ್ರದಲ್ಲಿ ಬಂಡೆಗಳ ನಡುವೆ ಸಿಲುಕಿದ್ದು, ಅದರಲ್ಲಿದ್ದ  9 ಮಂದಿಯನ್ನು ನೌಕಾಪಡೆ ಮತ್ತು ಕೋಸ್ಟ್‌ಗಾರ್ಡ್ ಸೋಮವಾರ ಕಾರ್ಯಾಚರಣೆ ನಡೆಸಿ ರಕ್ಷಿಸಿತ್ತು. ಆ ಬಳಿಕ  9 ಮಂದಿಯನ್ನು ಪಣಂಬೂರು ಎನ್‌ಎಂಪಿಟಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ, ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. 5 ಮಂದಿಯ ವರದಿ ಪಾಸಿಟಿವ್ ಬಂದಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಅವರ ಏಜನ್ಸಿ ಸಂಸ್ಥೆ ಹೊಟೇಲ್‌ಗೆ ಶಿಫ್ಟ್ ಮಾಡಿದೆ ಎಂದು ತಿಳಿದು ಬಂದಿದೆ. 5 ಮಂದಿಯ ಆರೋಗ್ಯ ಉತ್ತಮವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss