ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಉಡುಪಿಯ ಕಾಪು ಬಳಿ ಅರಬ್ಬೀ ಸಮುದ್ರದಲ್ಲಿ ಟಗ್ ಬೋಟ್ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆ ತಂದಿರುವ ರಕ್ಷಣಾ ಸಿಬ್ಬಂದಿಗೆ ಸಿಎಂ ಬಿಎಸ್ವೈ ಟ್ವೀಟ್ ಮೂಲಕ ಕೃತಜ್ಞತೆ ತಿಳಿಸಿದ್ದಾರೆ.
‘ಅರಬ್ಬೀ ಸಮುದ್ರದಲ್ಲಿ ಟಗ್ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಧನ್ಯವಾದಗಳು.ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯದ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಲಾಗುತ್ತಿದೆ’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ
ತೌಕ್ತೆ ಚಂಡಮಾರುತದಿಂದ ಅಲೆಗಳ ಹೊಡೆತಕ್ಕೆ ಸಿಲುಕಿ ಕೋರಮಂಡಲ ಟಗ್ ಬೋಟ್ ಉಡುಪಿಯ ಕಾಪು ದೀಪಸ್ತಂಭಂದ ಸಮೀಪ ಸಮುದ್ರದಲ್ಲಿ ಸಿಲುಕಿಕೊಂಡಿತ್ತು.