ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ವಲಯದ ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ಮಾಜಿ ಮುಖ್ಯಸ್ಥ ಸಮೀರ್ ವಾಂಖೆಡೆಗೆ ಬಂಧನದಿಂದ ರಕ್ಷಣೆ ನೀಡಿದ್ದ ಆದೇಶವನ್ನು ಗುರುವಾರ ಬಾಂಬೆ ಹೈಕೋರ್ಟ್‌ಗೆ ಜೂನ್ 23ರವರೆಗೆ ವಿಸ್ತರಿಸಿದೆ.
ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಹೆಸರು ಸೇರಿಸದಿರಲು ₹25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಿಬಿಐ ಕಳೆದ ತಿಂಗಳು ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು.
ಈ ಪ್ರಕರಣದಲ್ಲಿ ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ವಾಂಖೆಡೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜೂನ್ 23ರಂದು ನಡೆಸುವುದಾಗಿ ನ್ಯಾಯಮೂರ್ತಿಗಳಾದ ಎ.ಎಸ್.ಗಡ್ಕರಿ ಮತ್ತು ಎಸ್.ಜಿ.ಡಿಗೆ ಅವರ ವಿಭಾಗೀಯ ಪೀಠ ತಿಳಿಸಿದೆ.
ಪ್ರಕರಣದ ತನಿಖೆ ನಿರ್ಣಾಯಕ ಹಂತದಲ್ಲಿದೆ ಎಂದು ಸಿಬಿಐ ಪರ ವಕೀಲ ಕುಲದೀಪ್ ಪಾಟೀಲ್ ತಿಳಿಸಿದರು. 23ರಂದು ವಾಂಖೆಡೆ ಅವರ ಮನವಿ ಆಲಿಸುವುದಾಗಿ ನ್ಯಾಯಪೀಠ ಹೇಳಿದೆ.