ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಚರಣೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ, ಮಾಹಿತಿ ಪಡೆದುಕೊಂಡಿದ್ದಾರೆ.
ಈ ಕುರಿತು ತಮ್ಮ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಪುಷ್ಕರ್ ಸಿಂಗ್ ಧಾಮಿ, ‘ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ಸುರಕ್ಷತೆ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಪ್ರಧಾನಿ ಮೋದಿ ಅವರು ಇಂದು ಸಹ ಕರೆ ಮಾಡಿದ್ದು, ಕಾರ್ಮಿಕರ ರಕ್ಷಣೆಯೇ ನಮ್ಮ ಮೊದಲ ಆದ್ಯತೆಯಾಗಬೇಕೆಂದು ತಿಳಿಸಿದ್ದಾರೆ’ ಎಂದರು.
ಇದೇ ವೇಳೆ ಎಂಡೋಸ್ಕೋಪಿಕ್ ಕ್ಯಾಮೆರಾ ಮೂಲಕ ಕಾರ್ಮಿಕರೊಂದಿಗೆ ಸಂಭಾಷಣೆ ನಡೆಸಿರುವ ಕುರಿತು ಪ್ರಧಾನಿಯವರಿಗೆ ತಿಳಿಸಲಾಯಿತು ಎಂದು ಹೇಳಿದರು.
ನವೆಂಬರ್ 12ರಂದು ಸುರಂಗ ಕುಸಿತಗೊಂಡಿದ್ದು, ಅಲ್ಲಿಂದ ಇಲ್ಲಿಯವರೆಗೆ ಪ್ರಧಾನಿ ನಾಲ್ಕು ಬಾರಿ ಕರೆ ಮಾಡಿದ್ದಾರೆ. ಸೋಮವಾರವೂ ಕರೆ ಮಾಡಿ ಮಾತನಾಡಿದ್ದಾರೆ.