ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ಮಂದಿರದ ಹೊರ ಭಾಗದಲ್ಲಿ ಖಲಿಸ್ತಾನಿ ಪರ ಬೆಂಬಲಿಗರಿಂದ ಹಿಂದುಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಹಿಂದುಗಳ ಒಕ್ಕೂಟ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸಾವಿರಾರು ಕೆನಡಾದ ಹಿಂದೂಗಳು ಒಗ್ಗಟ್ಟಿನಿಂದ ಮೆರವಣಿಗೆ ನಡೆಸಿದರು. ಪ್ರತಿಭಟನಾಕಾರರು ಕೆನಡಾ ಮತ್ತು ಭಾರತದ ಧ್ವಜಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಮೆರವಣಿಗೆ ಉದ್ದಕ್ಕೂ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದರು.
ಇದೇ ವೇಳೆ ಖಲಿಸ್ತಾನ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಸುಮಾರು 20 ವರ್ಷಗಳಿಂದ ಕೆನಡಾದಲ್ಲಿ ಹಿಂದುಗಳು ಸತತವಾಗಿ ತಾರತಮ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಕೆಲವು ಪ್ರತಿಭಟನಾಕಾರರು ಆರೋಪಿಸಿದರು.