ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದಾಳಿ, ದೌರ್ಜನ್ಯವನ್ನು ವಿರೋಧಿಸಿ ಬಾಂಗ್ಲಾದೇಶದಾದ್ಯಂತ ಹಿಂದುಗಳು ಪ್ರತಿಭಟನೆ ನಡೆಸಿದ್ದಾರೆ. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಶಿಕ್ಷಕರ ಹತ್ಯೆ ಮತ್ತು ಹಿಂದೂ ಮಹಿಳೆಯರ ಅತ್ಯಾಚಾರದ ವಿರುದ್ಧ ಶುಕ್ರವಾರ ಚಿತ್ತಗಾಂಗ್‌ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

ನರೈಲ್ ಸಹಪಾರಾದಲ್ಲಿ ಹಿಂದೂಗಳ ಮೇಲಿನ ಬರ್ಬರ ಜಿಹಾದಿ ದಾಳಿಯನ್ನು ಪ್ರತಿಭಟಿಸಿ ಶಹಬಾಗ್ ಮತ್ತು ದೇಶಾದ್ಯಂತ ವಿವಿಧ ಹಿಂದೂ ಸಂಘಟನೆಗಳು ಶಾಂತವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ಬಾಂಗ್ಲಾದೇಶದ ಸುದ್ದಿ ಸಂಸ್ಥೆ ಹಿಂದೂ ಸಂಗ್ಬಾದ್ ಟ್ವೀಟರ್‌ ನಲ್ಲಿ ಬರೆದುಕೊಂಡಿದೆ.

ಈ ಹಿಂದೆ ಫೇಸ್ಬುಕ್‌ ನಲ್ಲಿ ಇಸ್ಲಾಂ ಧರ್ಮವನ್ನು ನಿಂದಿಸುವ ಪೋಸ್ಟ್‌ ಶೇರ್‌ ಮಾಡಿದ್ದಾನೆಂದು ಶುಕ್ರವಾರದ ಪ್ರಾರ್ಥನೆಯ ನಂತರ ಇಸ್ಲಾಮಿಸ್ಟ್‌ಗಳು ನರೈಲ್ ನ ಲೋಹಗರದ ಸಹಪಾರ ಪ್ರದೇಶದಲ್ಲಿ ಹಿಂದುವಿನ ಮನೆಯ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದವು. ಇದಲ್ಲದೇ ಅನೇಕ ಕಡೆಗಳಲ್ಲಿ ಹಿಂದೂ ಶಿಕ್ಷಕರು ಹಾಗೂ ಮಹಿಳೆಯರ ಮೇಲೆ ದೌರ್ಜನ್ಯವಾಗುತ್ತಿರುವ ಕುರಿತು ವರದಿಯಾಗಿದ್ದವು.

ಪ್ರಸ್ತುತ ಹಿಂದು ಸಂಘಟನೆಗಳು ಈ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿವೆ. ಈ ಕುರಿತು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಜನರ ವಿರುದ್ಧ ಕಠಿಣ ಕ್ರಮವನ್ನು ಸರ್ಕಾರ ಕೈಗೊಳ್ಳುತ್ತದೆಯೆಂದು ಬಾಂಗ್ಲಾದೇಶದ ಗೃಹ ಸಚಿವ ಅಸಾದುಝಮಾನ್ ಖಾನ್ ಹೇಳಿದ್ದಾರೆ. ಬಾಂಗ್ಲಾದೇಶದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ದಾಳಿಯ ಬಗ್ಗೆ ತನಿಖೆ ನಡೆಸಲು ಹೇಳಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!