ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜೀವನಾಡಿ ನದಿಗಳಾದ ಬೇಡ್ತಿ ಮತ್ತು ಅಘನಾಶಿನಿ ನದಿಗಳನ್ನು ಬಯಲುಸೀಮೆಗೆ ತಿರುಗಿಸುವ ನದಿ ಜೋಡಣೆ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಅಕ್ಟೋಬರ್ 10ರಂದು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪಶ್ಚಿಮಘಟ್ಟ ಹಾಗೂ ನದಿ ಕಣಿವೆಗಳ ಉಳಿವಿಗಾಗಿ ‘ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ’ ಈ ಹೋರಾಟವನ್ನು ಸಂಘಟಿಸಿದೆ. ಪ್ರತಿಭಟನೆಯಲ್ಲಿ ಉತ್ತರ ಕನ್ನಡದ ನಾಗರಿಕರು, ಪರಿಸರ ಪ್ರೇಮಿಗಳು, ವಿವಿಧ ಸಂಘಟನೆಗಳ ಗಣ್ಯರು … Continue reading ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ