ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅನಧಿಕೃತ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸುತ್ತಿದ್ದ ಆಟೋ ಚಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಮಧ್ಯರಾತ್ರಿ 12 ಗಂಟೆಯಿಂದ ಇಂದು ಮಧ್ಯರಾತ್ರಿಯವರೆಗೆ ಆಟೋ ಸಂಚಾರ ಸಂಪೂರ್ಣ ಬಂದ್ ಘೋಷಿಸಲಾಗಿತ್ತು.