ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಪೂರೈಸಲುನಿರಾಕರಣೆ ಮಾಡುತ್ತಿದ್ದು, ಹಾಗಾಗಿ ಕೇಂದ್ರದ ನಡೆ ಖಂಡಿಸಿ ನಾಳೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.
ಸದಾಶಿವನಗರದಲ್ಲಿ ಮಾತನಾಡಿದ ಅವರು, ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಇರುತ್ತೆ . ನಾನು ನಗರದ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆ. ಬಡವರಿಗೆ ಅಕ್ಕಿ ನೀಡದೆ ಕೇಂದ್ರವು ತೊಂದರೆ ನೀಡಲು ಹೊರಟಿದೆ. ಅಕ್ಕಿ ನೀಡಲು ನಿಯಮ, ಪದ್ಧತಿ ಇದೆ, ಪುಕ್ಕಟೆ ಏನು ಕೊಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಜೂನ್ 12ರಂದು 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುತ್ತೇವೆ ಎಂದು ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಹೇಳಿತ್ತು. ಆಮೇಲೆ ಮತ್ತೊಂದು ಪತ್ರ ಬರೆದು ಕೊಡಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ. ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದರು.