ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಚಾಟಿಯಲ್ಲಿ ಹೊಡೆದುಕೊಂಡು ಪ್ರತಿಭಟನೆ ನಡೆಸಿದ್ದಾರೆ.
ಇಂದು (ಡಿ.27) ಕೊಯಮತ್ತೂರಿನ ನಿವಾಸದ ಮುಂದೆ ಚಾಟಿಯಲ್ಲಿ ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣವನ್ನು ಸರ್ಕಾರ ನಿರ್ವಹಿಸಿದ ರೀತಿಯನ್ನು ವಿರೋಧಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನಿಭಾಯಿಸುವಲ್ಲಿ ಪೊಲೀಸರು ಮತ್ತು ರಾಜ್ಯ ಸರ್ಕಾರ ನಿರಾಸಕ್ತಿ ತೋರಿಸುತ್ತಿದೆ ಎಂದು ಪ್ರತಿಭಟನೆ ಮೂಲಕ ಖಂಡಿಸಿದ್ದಾರೆ.
ಇದಕ್ಕೂ ಮುನ್ನ ತಮಿಳುನಾಡು ರಾಜ್ಯದಲ್ಲಿ ಡಿಎಂಕೆ ಅಧಿಕಾರದಿಂದ ಕೆಳಗಿಳಿಯುವವರೆಗೂ ಶೂ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಜೊತೆಗೆ ಆರು ಬಾರಿ ಚಾಟಿ ಏಟು ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದರು.