ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತೈಲ ಬೆಲೆ ಹೆಚ್ಚಳ ವಿರೋಧಿಸಿ ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಯಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಮದ್ಯಪ್ರಾಚ್ಯದಲ್ಲಿನ ಕದನದಿಂದಾಗಿ ಸಿಲಿಂಡರ್ ಕೊರತೆ ಉಂಟಾಗಿದ್ದು, ಇದರಿಂದ ಜನರಿಗೆ ತೊಂದರೆಯಾಗುತ್ತಿದೆ. ಈ ಕಷ್ಟಕರ ಸನ್ನಿವೇಶವನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದ್ದು, ಈ ರೀತಿ ಮುಂದುವರಿದರೆ ಕರ್ನಾಟಕ ಬಂದ್ ನಡೆಸಬೇಕಾಗುತ್ತೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.
ಈ ವೇಳೆ ಹೊಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾದ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.



