ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಿನಲ್ಲಿ ಮತ್ತೆ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಭುಗಿಲೆದ್ದಿದೆ. ಹೋರಾಟಗಾರರು, ಸ್ವಾಮೀಜಿಗಳು, ರೈತರು ರೊಚ್ಚಿಗೆದ್ದಿದ್ದು, ಗುಬ್ಬಿ ತಾಲೂಕಿನ ಸುಂಕಾಪುರ ಮತ್ತು ಡಿ ರಾಮ್ ಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ತುಮಕೂರಿನ ಮಲ್ಲಸಂದ್ರದ ಕಳ್ಳಿಪಾಳ್ಯದ ರಸ್ತೆ ತಡೆದು ಬಿಜೆಪಿ ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ ಪ್ರತಿಭಟನೆ ಮಾಡಿದ್ದು, ಇದಕ್ಕೆ ಮಠಾಧೀಶರು ಕೂಡ ಸಾಥ್ ಕೊಟ್ಟರು.ಹೋರಾಟ ತೀವ್ರಗೊಳ್ಳುತ್ತಿದ್ದಂತೆಯೇ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ಪೊಲೀಸರು ಸುಂಕಾಪುರ ನಾಲೆ ಬಳಿಯ ಸುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿದೆ. ಆದರೂ ಲೆಕ್ಕಿಸದೇ ಪ್ರತಿಭಟನೆ ನಡೆಸಿದ್ದಾರೆ.
ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಜಿಲ್ಲಾಡಳಿತ ಕಾಮಗಾರಿಯನ್ನ ತಾತ್ಕಾಲಿಕವಾಗಿ ಸ್ಥಗಿತ ಮಾಡಿದೆ. ಬಳಿಕ ರೈತರು, ಬಿಜೆಪಿ ನಾಯಕರು ಪ್ರತಿಭಟನೆ ಕೈ ಬಿಟ್ಟಿದ್ದಾರೆ.
ಈ ಯೋಜನೆಗೆ ತುಮಕೂರು ಜಿಲ್ಲೆಯ ರಾಜಕಾರಣಿಗಳು, ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾರಣ ಏನಂದ್ರೆ ಗೊರೂರು ಡ್ಯಾಂನಿಂದ ವರ್ಷಕ್ಕೆ 24 TMC ನೀರನ್ನು ತುಮಕೂರು ಜಿಲ್ಲೆಗೆ ಹರಿಸಬೇಕೆಂದು ರಾಜ್ಯ ಸರ್ಕಾರ ನೀರು ಹಂಚಿಕೆ ಮಾಡಿದೆ. ಈಗ ಮಾಗಡಿ ತಾಲ್ಲೂಕಿಗೆ ಪ್ರತ್ಯೇಕವಾಗಿ ಹೊಸದಾಗಿ ನೀರು ಹಂಚಿಕೆ ಮಾಡಿಸಿಕೊಳ್ಳದೇ 0.75 ಟಿಎಂಸಿ ನೀರನ್ನು ಹರಿಸಲು ಪೈಪ್‌ಲೇನ್ ಕಾಮಗಾರಿ ನಡೆಸಲಾಗುತ್ತಿದೆ ಎನ್ನುವುದು ಆರೋಪ.