ನಾಗಮಂಗಲ ಕೋಮು ಗಲಭೆ ಖಂಡಿಸಿ ಪ್ರತಿಭಟನೆ: ಹಿಂದೂ ಕಾರ್ಯಕರ್ತರು ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಘರ್ಷಣೆ ಖಂಡಿಸಿ ಬೆಂಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆದಿದ್ದು, ಈ ವೇಳೆ ಹಲವು ಹಿಂದು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ನಗರದ ವತಿಯಿಂದ ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು, ಅಲ್ಲದೆ, ಸ್ಥಳದಲ್ಲಿ ಡಿಸಿಪಿ ಶೇಖರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಸ್ಥಳಕ್ಕೆ ಗಣೇಶ ಮೂರ್ತಿ ಸಹಿತ ಬಂದ ಹಿಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ತಪ್ಪಿಲ್ಲದಿದ್ದರೂ ಬಂಧನಕ್ಕೊಳಪಡಿಸಿರುವ ಹಿಂದುಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಹಲವರನ್ನು ವಶಕ್ಕೆ ಪಡೆದರು.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!